ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಜಲಮೂಲಗಳು ನಾಶವಾಗುತ್ತಿರುವುದು ತೀವ್ರ ನೀರಿನ ಕೊರತೆ ಮತ್ತು ಅಂತರ್ಜಲವು ಬರಿದಾಗುವುದಕ್ಕೆ ಎಡೆಮಾಡಿಕೊಟ್ಟಿರುವುದರಿಂದಾಗಿ ಜಲೀಯ ಸಸ್ಯ ಸಂಪತ್ತಿಗೆ ಮತ್ತು ಪ್ರಾಣಿ ಸಂಪತ್ತಿಗೆ ಬಾಧಕ ಉಂಟುಮಾಡುವುದಲ್ಲದೆ, ನೀರಾವರಿಗೆ, ಕುಡಿಯುವುದಕ್ಕೆ ನೀರು ಮತ್ತು ಜಾನುವಾರುಗಳ ಬಳಕೆಗೆ ನೀರಿನ ಲಭ್ಯತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಜಲಮೂಲಗಳ ರಕ್ಷಣೆ, ಸಂರಕ್ಷಣೆ ಮತ್ತು ಪುನಶ್ಚೇತನಗೊಳಿಸುವುದು ಬೇಕಾಗಿರುವುದುರಿಂದ ಹಾಗೂ ಜಲಮೂಲಗಳ ರಕ್ಷಣೆ, ಸಂರಕ್ಷಣೆ ಮತ್ತು ಪುನಶ್ಚೇತನಗೊಳಿಸುವ ಉದ್ದೇಶವನ್ನು ಸಾಧಿಸುವುದಕ್ಕಾಗಿ ಹಾಗೂ ಅಗತ್ಯವಾದ ಅಧಿಕಾರಗಳನ್ನು ಮತ್ತು ಪ್ರಕಾರ್ಯಗಳನ್ನು ಹೊಂದಿರುವ, ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಲು 2014 ರಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2014 ನ್ನು ಜಾರಿಗೊಳಿಸಿದೆ. ಎಲ್ಲಾ ಪೌರನಿಗಮಗಳ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಿಂದ ಹೊರಗೆ ಇರುವ ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ದಿಗಾಗಿಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರವನ್ನು 2014 ಅಧಿನಿಯಮದಡಿ ಸ್ಥಾಪಿಸಲಾಗಿದೆ.

ಸರ್ಕಾರದ ಅಧಿಸೂಚನೆ ಸಂಖ್ಯೆ: ಸಂವ್ಯಶಾಇ 11 ಶಾಸನ 2018 ದಿನಾಂಕ: 26.03.2018 ರಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಅಧಿನಿಯಮ, 2018 (2018 ಕರ್ನಾಟಕ ಅಧಿನಿಯಮ ಸಂಖ್ಯೆ:15, ದಿನಾಂಕ 26.03.2018) ಗಳನ್ವಯ ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರವು ನಿರಸನಗೊಂಡಿರುತ್ತದೆ. ಅದ್ದರಿಂದ ರಾಜ್ಯದ ಎಲ್ಲಾ ಕೆರೆಗಳು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಒಳಪಟ್ಟಿರುತ್ತವೆ.

ಮುಂದುವರಿದು ಮೇಲಿನ ಅಧಿನಿಯಮವನ್ನು 2018 ತಿದ್ದುಪಡಿಯಲ್ಲಿ ಎಲ್ಲಾ ಪೌರನಿಗಮಗಳ ಮತ್ತು ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಕೆರೆಗಳನ್ನು ಕೂಡಾ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಒಳಪಡಿಸಲಾಗಿದೆ.

ಇತ್ತೀಚಿನ ನವೀಕರಣ​ : 19-09-2023 12:41 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080